ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ವತಿಯಿಂದ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ – ಸಾಹಿತ್ಯ ಸಂಭ್ರಮದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕನ್ನಡ ಶಿಕ್ಷಕರಿಗೆ ಕಾರ್ಯಾಗಾರವು ದಿನಾಂಕ 09 ನವೆಂಬರ್ 2024ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ. ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ಅಂಬ್ಲಮೊಗರು ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ಡಾ. ರಾಮಮೂರ್ತಿ ಕೆ., ಬಂಟ್ವಾಳದ ಎಸ್.ವಿ.ಎಸ್. ದೇವಳ ಪ.ಪೂ. ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ, ಸಜ್ಜನ ಪ್ರತಿಷ್ಠಾನದ ಕಾರ್ಯದರ್ಶಿ ಶರೀಫ್ ಜಟ್ಟಿಪಳ್ಳ, ಕ.ಸಾ.ಪ. ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಗೌರವ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ.ಸಾ.ಪ. ನಿರ್ದೇಶಕರುಗಳಾದ ಶ್ರೀಮತಿ ರಶ್ಮಿ ಭಟ್ ಪ್ರಾರ್ಥಿಸಿ, ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಶ್ರೀಮತಿ ಸಾವಿತ್ರಿ ಕಣೆ ಮರಡ್ಕ ವಂದಿಸಿ, ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.