Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕದ್ರಿ ಬಾಲಭವನದಲ್ಲಿ “ಕಥಾಲಾಪ – ಚಿಣ್ಣರ ಚಿಲಿಪಿಲಿ” ಕಾರ್ಯಕ್ರಮ
    News

    ಕದ್ರಿ ಬಾಲಭವನದಲ್ಲಿ “ಕಥಾಲಾಪ – ಚಿಣ್ಣರ ಚಿಲಿಪಿಲಿ” ಕಾರ್ಯಕ್ರಮ

    March 13, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    13 ಮಾರ್ಚ್ 2023, ಮಂಗಳೂರು: ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ “ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ”ದ ಉದ್ಘಾಟನೆಯ ಅಂಗವಾಗಿ “ಕಥಾಲಾಪ – ಚಿಣ್ಣರ ಚಿಲಿಪಿಲಿ” ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ದಿನಾಂಕ 12-03-2023ರಂದು ಅತ್ಯಂತ ಸರಳವಾಗಿ ನೆರವೇರಿತು.

    ಕಾರ್ಯಕ್ರಮ ಉದ್ಘಾಟಿಸಿದ ಎನ್.ಎಸ್.ಸಿ.ಡಿ.ಎಫ್. ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ “ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದು ಅಧಿಕೃತವಾಗಿ ಅನಾವರಣಗೊಂಡಿದೆ. ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿವೆ, ಆದರೆ ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ಮುಂದುವರಿಸುತ್ತಿದೆ. ಈ ಕಾರಣದಿಂದಾಗಿ ಭಾರತದ ಅನೇಕ ಹಳ್ಳಿಗಳು ಅಭಿವೃದ್ಧಿಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ, ಸಮಾಜದ ಎಲ್ಲಾ ಸಮುದಾಯದ ಆಶಯಗಳಿಗೆ ಪ್ರತಿಷ್ಠಾನ ಸ್ಪಂದಿಸುವಂತಾಗಬೇಕು. ಆಗಲೇ “ಅನಾವರಣ”ದ ಸಮಾಜಮುಖಿ ಉದ್ದೇಶಗಳು ಈಡೇರಲು ಸಾಧ್ಯ” ಎಂದು ಮಾರ್ಮಿಕವಾಗಿ ಹೇಳಿದರು.

    ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ ಅಧ್ಯೆಕ್ಷೆ, ನ್ಯಾಯವಾದಿ ಪರಿಮಳ ರಾವ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ಎಸ್.ಎಸ್.ಎ.ಪಿ. ಅಧ್ಯೆಕ್ಷೆ ರಾಣಿಪುಷ್ಪಲತಾದೇವಿ, ಕಥಾಲಾಪ ಅಧ್ಯಕ್ಷರಾದ ಮುಕ್ತಕ, ಗಜಲ್ ಕವಿ ಡಾ. ಸುರೇಶ್ ನೆಗಳಗುಲಿ, “ಕಥಾಲಾಪ”ದ ಸಂಚಾಲಕಿ ಗೀತಾ ಲಕ್ಷ್ಮೀಶ ಉಪಸ್ಥಿತರಿದ್ದರು. ಆಶ್ವಿಜ ಶ್ರೀಧರ್ ಪ್ರಾರ್ಥನೆ ಗೈದರು, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯೆಕ್ಷೆ ಪರಿಮಳ ರಾವ್ ಕೆ. ಸ್ವಾಗತಿಸಿ, ಪ್ರಾಸ್ತಾವನೆ ಗೈದರು. ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

    ಕಥಾಲಾಪದಲ್ಲಿ…..
    ವ. ಉಮೇಶ್ ಕಾರಂತ್, ಅಶ್ವಿಜ ಶ್ರೀಧರ್, ಜಯರಾಮ ಪಡ್ರೆ, ರಾಮಾಂಜಿ ನಮ್ಮ ಭೂಮಿ, ಗೋಪಾಲಕೃಷ್ಣ ಶಾಸ್ತ್ರಿ, ರೇಖಾ ಸುದೇಶ್ ರಾವ್‌, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಮಾನ್ವಿ ಮಂಗಳೂರು, ಹಿತೇಶ್ ಕುಮಾರ್ ಎ, ಸುಗಂಧಿ ಶ್ಯಾಮ್, ಪದ್ಮನಾಭ ಮಿಜಾರು, ದೇವರಾಜ್ ಕುಂಬ್ಳೆ, ಚಿತ್ರಕಲಾ ದೇವರಾಜ್, ರೇಮಂಡ್ ಡಿಕುನ್ಹಾ ತಾಕೊಡೆ, ಅನುರಾಧಾ ರಾಜೀವ್, ಹರೀಶ್ ಮೆಲ್ಕಾರ್, ದಯಾಮಣಿ ಎಕ್ಕಾರ್, ವಾಣಿ ಲೋಕಯ್ಯ, ಸೌಮ್ಯ ಆರ್. ಶೆಟ್ಟಿ, ಎ.ಕೆ. ಕುಕ್ಕಿಲಾ ಕತೆಗಾರರು ತಮ್ಮ ಸ್ವರಚಿತ ಕತೆಗಳನ್ನು ವಾಚಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ರಂಗನಟಿ ಶ್ರೀಮತಿ ಶೋಭಾ ವೆಂಕಟೇಶ್ ರವರಿಗೆ “ಮಲಬಾರ್ ವಿಶ್ವರಂಗ ಪುರಸ್ಕಾರ’’
    Next Article ಸಾಹಿತಿ ಶಶಿಕಲಾ ಚಂದ್ರಶೇಖರ್ ರವರಿಗೆ ಸನ್ಮಾನ
    roovari

    Add Comment Cancel Reply


    Related Posts

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಎನ್.ಐ.ಟಿ.ಕೆ.ಯಲ್ಲಿ ‘ವಿರಾಸತ್’ ಸಂಗೀತ, ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ | ಫೆಬ್ರುವರಿ 4ರಿಂದ 8  

    February 3, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಕಲಾರಾಧಕರನ್ನು ಮಂತ್ರಮುಗ್ಧರನ್ನಾಗಿಸಿದ ‘ನೃತ್ಯೋತ್ಕ್ರಮಣ’ ಭರತನಾಟ್ಯ ಕಾರ್ಯಕ್ರಮ

    January 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.