ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2024ರಂದು ಸಂಜೆ 4-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಇವರ ಅಧ್ಯಕ್ಷತೆಯಲ್ಲಿ ವಿಶ್ರಾಂತ ಮುಖ್ಯ ನ್ಯಾಯಾದೀಶರಾದ ಕೆ. ಶ್ರೀಧರ ರಾವ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಭಾರತಮಿತ್ರ ಸನ್ಮಾನಿತರು ಇತಿಹಾಸ ಶಾಸನ ಹಾಗೂ ಭಾರತೀಯ ಕಲಾತಜ್ಞೆ ಡಾ. ವಸುಂಧರಾ ಕವಲಿ ಫಿಲಿಯೋಜಾ ಕನ್ನಡ ರಾಜ್ಯೋತ್ಸವದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಪರ ಹೋರಾಟಗಾರ ಶ್ರೀ ಗೋ. ಮೂರ್ತಿ ಯಾದವ್, ರಂಗಭೂಮಿ ಕಲಾವಿದರಾದ ಶ್ರೀ ಕೆ. ರೇವಣ್ಣ, ಸಾಹಿತಿಗಳಾದ ಡಾ. ಮೀರಾಸಾಬೀಹಳ್ಳಿ ಶಿವಣ್ಣ, ಕನ್ನಡ ಪರ ಹೋರಾಟಗಾರ ಶ್ರೀ ಜಿ. ಬಾಲಾಜಿ, ರಂಗಭೂಮಿ ಕಲಾವಿದರಾದ ಶ್ರೀ ಕೃಷ್ಣಮೂರ್ತಿ ಕವತ್ತಾರ್, ಸಾಹಿತಿಗಳಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಇವರುಗಳಿಗೆ ‘ಕನ್ನಡ ಕಾಯಕ ದತ್ತಿ ಪ್ರಶಸ್ತಿ’ ಹಾಗೂ ಡಾ. ಟಿ.ವಿ. ವೆಂಕಟಾಚಲಶಾಸ್ತ್ರೀ ವಿದ್ವತ್ ದತ್ತಿ ಪ್ರಶಸ್ತಿ, ಶ್ರೀಮತಿ ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿ, ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ, ಶ್ರೀ ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ ಪ್ರದಾನ ನಡೆಯಲಿದೆ.