ಕಾರ್ಕಳ : ಆಳ್ವಾಸ್ ನುಡಿಸಿರಿ – ವಿರಾಸತ್ ಘಟಕ ಕಾರ್ಕಳ ಇದರ ವತಿಯಿಂದ ಆಳ್ವಾಸ್ ಪ್ರತಿಭಾವಂತ ವಿದ್ಯಾರ್ಥಿಗಳಿಂದ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ವನ್ನು ದಿನಾಂಕ 03 ಡಿಸೆಂಬರ್ 2024ರಂದು ಸಂಜೆ ಗಂಟೆ 5-45ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರೊ. ಎಂ. ರಾಮಚಂದ್ರ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ, ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಗೌರವಾಧ್ಯಕ್ಷರಾದ ವಿ. ಸುನಿಲ್ ಕುಮಾರ್ ಇವರು ಘನ ಉಪಸ್ಥಿತಿಯಲ್ಲಿರಲಿದ್ದಾರೆ. ಉದ್ಯಮಿ ಶಶಿಧರ ಶೆಟ್ಟಿ ಬರೋಡ ಕಾರ್ಯಕ್ರಮ ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಅಧ್ಯಕ್ಷ ವಿಜಯ ಶೆಟ್ಟಿ ವಹಿಸಲಿದ್ದು, ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಒಂದನೇಯ ಮೊಕ್ತೇಸರ ಜಯರಾಮ ಪ್ರಭು, ಅತ್ತೂರು ಸೈಂಟ್ ಲಾರೆನ್ಸ್ ಬಸಲಿಕಾ ಚರ್ಚ್ ನಿರ್ದೇಶಕ ರೇ. ಫಾ. ಅಲ್ಬನ್ ಡಿಸೋಜ ಹಾಗೂ ಅತ್ತೂರು ಇಮಾಮರು ಅಲ್ ಹವ್ವಾ ಮಸೀದಿಯ ಮೌಲಾನಾ ಅಬ್ದುಲ್ ಹಫೀಝ್ ದಿವ್ಯ ಉಪಸ್ಥಿತಿಯಲ್ಲಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು, ತರಂಗ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮೀ, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಉದ್ಯಮಿ ಬೋಳ ಪ್ರಭಾಕರ್ ಕಾಮತ್, ವಿದ್ಯಾಂಗ ಉಪನಿರ್ದೇಶಕ ಗಣಪತಿ ಕೆ., ಶ್ರೀ ಭುವನೇಂದ್ರ ಕಾಲೇಜು ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ. ಪದ್ಮನಾಭ ಗೌಡ, ಎಸ್.ಕೆ.ಎಸ್ ಕಾರ್ಕಳ ಇನ್‌ಪ್ರ ಪ್ರಾಜೆಕ್ಟ್ ಪ್ರೈ, ಲಿ. ಎಂ.ಡಿ. ಸುಜಯ ಕುಮಾರ್ ಶೆಟ್ಟಿ, ನಿಟ್ಟೆ ಕ್ಯಾಂಪಸ್‌ನ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಯೋಗೀಸ್ ಹೆಗ್ಡೆ, ನಿವೃತ್ತ ಬ್ಯಾಂಕ್ ಅಧಿಕಾರಿ ಎ. ಮೋಹನ್ ಪಡಿವಾಳ್, ಕಟೀಲ್ ಇಂಟರ್‌ನ್ಯಾಶನಲ್ ಹೊಟೇಲ್ ಮಾಲಕ ರೋಹಿತ್ ಕುಮಾರ್ ಕಟೀಲ್, ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಉದ್ಯಮಿ ಕೃಷ್ಣಮೂರ್ತಿ, ಶೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ, ಕ್ರೈಸ್ಟೇಕಿಂಗ್ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಡಾ. ಪೀಟರ್ ಫೆರ್ನಾಂಡೀಸ್, ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ. ಎಸ್. ಇಮ್ಮಿಯಾಜ್ ಅಹಮದ್, ಜೋಡುರಸ್ತೆ ರಾಜಾಪುರ ಸಾರಸ್ವತ ಕ್ರೆಡಿಟ್ ಕೋಪರೇಟಿವ್, ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಜನಾರ್ದನ ಶೆಟ್ಟಿಗಾರ್, ಕ್ರೈಸ್ಟಕಿಂಗ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅವಿಲಿನ್ ಆರ್. ಲೂಯಿಸ್, ಉದ್ಯಮಿಗಳಾದ ಬೋಳ ದಾಮೋದರ ಕಾಮತ್, ಗಣೇಶ್ ಶೆಟ್ಟಿ ಇರ್ವತ್ತೂರು, ಹೊಟೇಲ್ ಜೈನ್ ಮಾಲಕ ಗುಣಪಾಲ ಜೈನ್, ಉದ್ಯಮಿ ನಿತ್ಯಾನಂದ ಪೈ, ಪ್ರಕಾಶ್ ಹೊಟೇಲ್ ಮಾಲಕ ಹರಿಪ್ರಕಾಶ್, ಉದ್ಯಮಿ ಜಾನ್ ಆರ್. ಡಿಸಿಲ್ವ ಹಾಗೂ ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ವೆಂಕಟರಮಣ ಐತಾಳ್ ಭಾಗಿಯಾಗಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಆಳ್ವಾಸ್ ನುಡಿಸಿರಿ-ವಿರಾಸತ್ ಘಟಕ ಕಾರ್ಕಳ ಸಂಚಾಲಕ ಸುಧಾಕರ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ದೇಶ ವಿದೇಶಗಳ ವಿವಿಧ ಪ್ರಕಾರದ ಶಾಸ್ತ್ರೀಯ, ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮವನ್ನೊಳಗೊಂಡ 2 ಗಂಟೆ 30 ನಿಮಿಷದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿದೆ.