ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮದ ಪ್ರಯುಕ್ತ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಬೊಳುವಾರು ಪುತ್ತೂರು ಇಲ್ಲಿ ‘ಕೃಷ್ಣ ಸಂಧಾನ’ ಎಂಬ ಆಖ್ಯಾನದೊಂದಿಗೆ ದಿನಾಂಕ 30 ನವೆಂಬರ್ 2024ರಂದು ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಮಾಸ್ಟರ್ ಪರೀಕ್ಷಿತ್ ಹಂದ್ರಟ್ಟ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಹಾಗೂ ಮಾಂಬಾಡಿ ವೇಣುಗೋಪಾಲ ಭಟ್ (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಕೌರವ), ದುಗ್ಗಪ್ಪ ನಡುಗಲ್ಲು (ಧರ್ಮರಾಯ), ಗಣರಾಜ ಭಟ್ ಬಡೆಕ್ಕಿಲ (ವಿದುರ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.