ಬೆಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2023ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಕತೆಗಾರ ಡಾ.ಮಿರ್ಜಾ ಬಷೀರ್ ಅವರ ‘ಅಬ್ರಕಡಬ್ರ’ ಕಥಾಸಂಕಲನ ಆಯ್ಕೆಯಾಗಿದೆ.
ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದು, ಕೆ. ಪಿ. ಎಸ್. ಸಿ. ಪರೀಕ್ಷೆ ಮೂಲಕ ಸರ್ಕಾರಿ ಸೇವೆಗೆ ಸೇರ್ಪಡೆಯಾಗಿ, ಪಶು ಸಂಗೋಪನಾ ಇಲಾಖೆಯಲ್ಲಿ ಸುಮಾರು 34 ವರ್ಷಗಳ ಕಾಲ ಪಶು ವೈದ್ಯರಾಗಿ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿರುವ ಡಾ.ಮಿರ್ಜಾ ಬಷೀರ್ ಮೂಲತಃ ಚಿತ್ರದುರ್ಗದ ಚಳ್ಳಕೆರೆಯವರು.