ಮಂಗಳೂರು : ಪುಸ್ತಕ ಬಹುಮಾನ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024ರ ಕ್ಯಾಲೆಂಡರ್ ವರ್ಷದಲ್ಲಿ (01 ಜನವರಿ 2024ರಿಂದ 31 ಡಿಸೆಂಬರ್ 2024) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/- ಗೌರವಧನ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ.
ಗೌರವ ಪ್ರಶಸ್ತಿ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನಲ್ಲಿ 1. ಕೊಂಕಣಿ ಸಾಹಿತ್ಯ, 2. ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) 3. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಸಾಧಕರು ನೇರವಾಗಿ ಅಥವಾ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2024’ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ -2024’ ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕಾ ಕಟ್ಟಡ, ಲಾಲ್ ಭಾಗ್, ಮಂಗಳೂರು -575003 ಇವರಿಗೆ ದಿನಾಂಕ 31-12-2024ರೊಳಗಾಗಿ ಕಳುಹಿಸಿಕೊಡುವಂತೆ ಕೋರಲಾಗಿದೆ.