ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ದಿನಾಂಕ 10 ಡಿಸೆಂಬರ್ 2024ರಿಂದ 15 ಡಿಸೆಂಬರ್ 2024ರವರೆಗೆ ‘ಆಳ್ವಾಸ್ ವಿರಾಸತ್ 2024’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 10 ಡಿಸೆಂಬರ್ 2024ರಂದು ಸಂಜೆ 5-30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿರುವರು. ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಇವರು ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ., ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ಬಿ.ಎಲ್. ಶಂಕರ್ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್, ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾಯರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಇಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ಸ್ ನ ಎಂ.ರವೀಂದ್ರನಾಥ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಜಯಶ್ರೀ ಅಮರನಾಥ ಶೆಟ್ಟಿ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್‌ಫ್ರಾಟೆಕ್‌ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್‌ಸ್ಟ್ರಕ್ಷನ್ಸ್ ಪ್ರವೀಣ್ ಕುಮಾರ್ ಉಪಸ್ಥಿತರಿರುವರು. ಸಂಜೆ ಗಂಟೆ 6-35ಕ್ಕೆ 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿಂದ 3000ಕ್ಕೂ ಮಿಕ್ಕಿದ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ಹಾಗೂ ರಾತ್ರಿ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ರಥ ಸಂ ಚಲನ ಮತ್ತು ರಥಾರತಿ ನಡೆಯಲಿದೆ.
ದಿನಾಂಕ 11 ಡಿಸೆಂಬರ್ 2024ರಂದು ಸಂಜೆ ಗಂಟೆ 5-45ಕ್ಕೆ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಇವರಿಗೆ ‘ಆಳ್ವಾಸ್ ವಿರಾಸತ್ 2024’ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಪ್ರಶಸ್ತಿ ಪುರಸ್ಕೃತರಿಂದ ಹಿಂದೂಸ್ಥಾನಿ ಗಾಯನ ಪ್ರಸ್ತುತಗೊಳ್ಳಲಿದೆ. ರಾತ್ರಿ ಗಂಟೆ 7-45ರಿಂದ ಗುಜರಾತ್‌ನ ರಂಗ್ ಮಲ್ಹರ್ ದಿ ಫೋಕ್ ಆರ್ಟ್ಸ್ ತಂಡದಿಂದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ ಹಾಗೂ 9-00 ಗಂಟೆಗೆ ಆಳ್ವಾಸ್ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.
ದಿನಾಂಕ 12 ಡಿಸೆಂಬರ್ 2024ರಂದು ಸಂಜೆ ಗಂಟೆ 5-45ಕ್ಕೆ ದೀಪ ಪ್ರಜ್ವಲನ ಹಾಗೂ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6-00 ಗಂಟೆಗೆ ಗುಜರಾತ್ ಒಸ್ಮಾನ್ ಮೀರ್ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8-15ರಿಂದ ನೃತ್ಯ ವೈವಿಧ್ಯ ನಡೆಯಲಿದೆ. ಉಡುಪಿಯ ಕೊಡವೂರು ನೃತ್ಯ ನಿಕೇತನ, ಬೆಂಗಳೂರು ಚಿಗುರು ನೃತ್ಯಾಲಯ, ಮಂಗಳೂರು ಸನಾತನ ನಾಟ್ಯಾಲಯ, ಕುಂದಾಪುರ ನೃತ್ಯ ವಸಂತ ನಾಟ್ಯಾಲಯ, ಮಂಗಳೂರು ಗಾನ ನೃತ್ಯ ಅಕಾಡೆಮಿ. ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಕಲಾವಿದರು ನೃತ್ಯ ವೈವಿಧ್ಯ ನಡೆಸಿಕೊಡುವರು. ರಾತ್ರಿ ಗಂಟೆ 9-15ರಿಂದ ಆಳ್ವಾಸ್ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.
ದಿನಾಂಕ 13 ಡಿಸೆಂಬರ್ 2024ರಂದು ಸಂಜೆ ಗಂಟೆ 5-45ಕ್ಕೆ ದೀಪ ಪ್ರಜ್ವಲನ ಹಾಗೂ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6-00 ಗಂಟೆಗೆ ನೀಲಾದ್ರಿ ಕುಮಾರ್ ಮತ್ತು ತಂಡದಿಂದ ’ಸೌಂಡ್ ಆಫ್ ಇಂಡಿಯಾ’ ಹಾಗೂ ಗಂಟೆ 8-15ಕ್ಕೆ ಕೋಲ್ಕತ್ತಾದ ಆಶೀಮ್ ಬಂಧು ಭಟ್ಟಾಚಾರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ನೃತ್ಯ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ. ರಾತ್ರಿ 9-00 ಗಂಟೆಗೆ ಬೆಂಗಳೂರು ಕಾರ್ತೀಸ್ ಪರ್‌ಫಾರ್ಮಿಂಗ್ ಆರ್ಟ್ಸ್ ’ನೃತ್ಯೋಲ್ಲಾಸ’ ಹಾಗೂ ಬೆಂಗಳೂರು ಶ್ರೀ ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ ಗಂಟೆ 9-15ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.
ದಿನಾಂಕ 14 ಡಿಸೆಂಬರ್ 2024ರಂದು ಸಂಜೆ 5-45ಕ್ಕೆ ದೀಪ ಪ್ರಜ್ವಲನ ಹಾಗೂ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ ಗಂಟೆ 6-00ಕ್ಕೆ ಚೆನ್ನೈ ಸ್ಟೆಕೇಟೋದ ಖ್ಯಾತ 25 ಕಲಾವಿದರಿಂದ ಭರ್ಜರಿ ’ಸಂಗೀತ ರಸದೌತಣ’ ಹಾಗೂ ರಾತ್ರಿ 9-00 ಗಂಟೆಗೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನ ನಡೆಯಲಿದೆ.
ದಿನಾಂಕ 15 ಡಿಸೆಂಬರ್ 2024ರಂದು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳ ದಿನಪೂರ್ತಿ ತೆರೆದಿರುತ್ತದೆ. ಕಾರ್ಯಕ್ರಮಗಳು ಸರಿಯಾದ ಸಮಯಕ್ಕೆ ಆರಂಭವಾಗುತ್ತವೆ.