ಸಾಲಿಗ್ರಾಮ : ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಇದರ ಉದ್ಘಾಟನಾ ಸಮಾರಂಭವನ್ನು ದಿನಾಂಕ 15 ಡಿಸೆಂಬರ್ 2024ರಂದು ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ವಠಾರದಲ್ಲಿ ಸಂಜೆ 6-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಡಾ. ಕೆ.ಎಸ್. ಕಾರಂತ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ದಿನಾಂಕ 15 ಡಿಸೆಂಬರ್ 2024ರಂದು ಹಂಗಾರಕಟ್ಟೆ ಚೇತನ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ವನವಿಲಾಸ’ ಮತ್ತು ಕೋಟ ವಿವೇಕ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ದ್ರೌಪದಿ ಪ್ರತಾಪ’, ದಿನಾಂಕ 16 ಡಿಸೆಂಬರ್ 2024ರಂದು ಕುಂದಾಪುರ ಬೀಜಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ರಾಮಾಶ್ವಮೇಧ’ ಮತ್ತು ಕೋಟ ಗಿಳಿಯಾರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಅಭಿಮನ್ಯು ಕಾಳಗ’, ದಿನಾಂಕ 17 ಡಿಸೆಂಬರ್ 2024ರಂದು ಕೋಟ ಮಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಜಾಂಬವತೀ ಕಲ್ಯಾಣ’ ಮತ್ತು ಸಾಸ್ತಾನ ಗುಂಡ್ಮಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಂದ ‘ಶ್ವೇತಕುಮಾರ ಚರಿತ್ರೆ’, ದಿನಾಂಕ 18 ಡಿಸೆಂಬರ್ 2024ರಂದು ಕೋಡಿಕನ್ಯಾನ ಸೋಮಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ದ್ರೌಪದಿ ಪ್ರತಾಪ’ ಮತ್ತು ಕೋಟ ವಿವೇಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ‘ರಾಣಿ ಶಶಿಪ್ರಭಾ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.