ಶಿವಮೊಗ್ಗ: ತೀರ್ಥಹಳ್ಳಿಯ ಕುವೆಂಪು ಕವಿಶೈಲದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವರಾದ ಬಿ. ಎಲ್. ಶಂಕರ್ ಇವರನ್ನು ಸರ್ಕಾರ ನೇಮಿಸಿದೆ.
ಪ್ರತಿಷ್ಠಾನದ ಪದನಿಮಿತ್ತ ಉಪಾಧ್ಯಕ್ಷರಾಗಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಪದನಿಮಿತ್ತ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ, ಸಮಕಾರ್ಯದರ್ಶಿಯಾಗಿ ಕಡಿದಾಳ್ ಪ್ರಕಾಶ್, ಖಜಾಂಚಿಯಾಗಿ ಡಿ. ಎಂ. ಮನುದೇವ್ ಹಾಗೂ ಸದಸ್ಯರುಗಳಾಗಿ ಹಿರಿಯ ಪತ್ರಕರ್ತ ಹಾಗೂ ಜಾನಪದ ತಜ್ಞ ಶಿವಾನಂದ ಕರ್ಕಿ, ಸಿ. ಬಸವಲಿಂಗಯ್ಯ, ಎಸ್. ವಿ. ದಯಾನಂದ, ಕುವೆಂಪು ವಿ. ವಿ. ಇದರ ಮಾಜಿ ಕುಲಪತಿ ಡಾ. ಚಿದಾನಂದಗೌಡ, ಎಂ. ಸಿ. ನರೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಶಿವಮೊಗ್ಗ ಉಪಅರಣ್ಯ ಸಂರಕ್ಷಣಾಧಿಕಾರಿ, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು, ಲೋಕೋಪಯೋಗಿ ಇಲಾಖೆಯ ವೃತ್ತ ಅಧೀಕ್ಷಕ ಇಂಜಿನಿಯರ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರುಗಳು, ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರುಗಳು ಮತ್ತು ಪದನಿಮಿತ್ತ ಸದಸ್ಯರು, ತೀರ್ಥಹಳ್ಳಿ ಶಾಸಕರು, ದೇವಂಗಿ ಗ್ರಾಮಪಂಚಾಯತ್ ಅಧ್ಯಕ್ಷರು, ತೀರ್ಥಹಳ್ಳಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರುಗಳನ್ನು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ಆದೇಶ ಹೊರಡಿಸಿದೆ.