ಬಿದ್ಕಲ್ ಕಟ್ಟೆ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುತ್ತಿರುವ ಪ್ರದರ್ಶನಾ ಸಂಘಟನ ಸಮಿತಿ ಬಿದ್ಕಲ್ ಕಟ್ಟೆ ಇವರ ಸಹಯೋಗದೊಂದಿಗೆ ದಿನಾಂಕ 19 ಡಿಸೆಂಬರ್ 2024ರಂದು ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವಠಾರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮವು ಉದ್ಘಾಟನೆಗೊಂಡಿತು.
ಈ ಸಮಾರಂಭವನ್ನು ಉದ್ಯಮಿಗಳಾದ ಎಚ್. ಶಂಕರ್ ಹೆಗ್ಡೆ ಜನ್ನಾಡಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರದರ್ಶನಾ ಸಂಘಟನ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಇಂಜಿನಿಯರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿ, ಹಾಲಾಡಿ ವಲಯ ಭಜನಾ ಮಂಡಳಿಗಳ ಅಧ್ಯಕ್ಷರಾದ ಶ್ರೀಮತಿ ಸುಶೀಲಾ ಬಿ. ಶೆಟ್ಟಿ, ಪಂಚಾಯತ್ ಪಿ.ಡಿ.ಒ. ಶ್ರೀಮತಿ ರೇಖಾ ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ ಸಂಘಟನಾ ಸಮಿತಿಯ ಸಂಚಾಲಕರಾದ ಜಯಪ್ರಕಾಶ್ ಶೆಟ್ಟಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಕಲಾಪ್ರೀತಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು. ಟ್ರಸ್ಟಿನ ಕೋಶಾಧಿಕಾರಿ ಎಚ್.ಎನ್. ಶೃಂಗೇಶ್ವರ ಧನ್ಯವಾದ ಸಲ್ಲಿಸಿದರು. ಬಳಿಕ ಸರಕಾರಿ ಪ್ರೌಢಶಾಲೆ, ಬೇಳೂರು ಇದರ ವಿದ್ಯಾರ್ಥಿಗಳಿಂದ ಸ್ಕಂದ ಇವರ ನಿರ್ದೇಶನದಲ್ಲಿ ‘ಚಕ್ರವ್ಯೂಹ’ ಮತ್ತು ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇದರ ವಿದ್ಯಾರ್ಥಿಗಳಿಂದ ಮಂಜುನಾಥ್ ಕುಲಾಲ್ ಇವರ ನಿರ್ದೇಶನದಲ್ಲಿ ‘ವೀರಮಣಿ ಕಾಳಗ’ ಯಕ್ಷಗಾನ ಪ್ರದರ್ಶನಗೊಂಡಿತು. ಬಿದ್ಕಲ್ ಕಟ್ಟೆಯಲ್ಲಿ ನಾಲ್ಕು ದಿನಗಳ ಕಾಲ ಎಂಟು ಶಾಲೆಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.