ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ), ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಆಕೃತಿ ಆಶಯ ಪಬ್ಲಿಕೇಷನ್ಸ್ ಮಂಗಳೂರು, ಇವರ ಸಹಯೋಗದೊಂದಿಗೆ ಸುಖಲಾಕ್ಷಿ ವೈ. ಸುವರ್ಣ ಇವರ ಮುಂಬಯಿ ಮಹಿಳೆಯರ ಬದುಕಿನ ಕುರಿತಾದ ಕ್ಷೇತ್ರ ಕಾರ್ಯದ ಸಂಕಲನ ‘ಮುಂಬಯಿ ಮತ್ತು ಮಹಿಳೆ’ ಪುಸ್ತಕದ ಲೋಕಾರ್ಪಣಾ ಸಮಾರಂಭವು ದಿನಾಂಕ 24 ಡಿಸೆಂಬರ್ 2024ರ ಮಂಗಳವಾರ ಸಂಜೆ ಘಂಟೆ 4.00ಕ್ಕೆ ಮಂಗಳೂರಿನ ಎಮ್. ಜಿ. ರಸ್ತೆಯಲ್ಲಿರುವ ಎಸ್. ಡಿ. ಎಮ್. ಲಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿರುವರು. ಸಂಶೋಧಕರು ಮತ್ತು ಮುಂಬಯಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ವಸಂತ ಕುಮಾರ ತಾಳ್ತಜೆ ಇವರು ಕೃತಿ ಲೋಕಾರ್ಪಣೆಗೊಳಿಸಲಿದ್ದು, ಹಿರಿಯ ಸಾಹಿತಿ ಹಾಗೂ ಸಂಶೋಧಕರಾದ ಡಾ. ಕೊಳ್ಳಪ್ಪೆ ಗೋವಿಂದ ಭಟ್ ಕೃತಿ ಪರಿಚಯ ಹಾಗೂ ಹಿರಿಯ ಲೇಖಕಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಕಲಾ ನಂದಾವರ ಕೃತಿ ಅವಲೋಕನ ಮಾಡಲಿರುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ಭಾಗವಹಿಸಲಿದ್ದು, ಹಿರಿಯ ಲೇಖಕಿ ಮತ್ತು ಸಂಶೋಧಕರಾದ ಬಿ. ಎಂ. ರೋಹಿಣಿ, ‘ನಮ್ಮ ಕುಡ್ಲ’ ಮಂಗಳೂರು ಇದರ ನಿರ್ದೇಶಕರಾದ ಲೀಲಾಕ್ಷ ಬಿ. ಕರ್ಕೇರ, ಶ್ರೀಗುರು ಸೌಹಾರ್ದ ಸಹಕಾರಿ ಸಂಘ ಹಾಗೂ ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣ, ಯಶಸ್ವಿನಿ ಸೌಹಾರ್ದ ಸಹಕಾರಿ ಸಂಘ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಚಂಚಲಾ ತೇಜೋಮಯ, ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಇದರ ಸದಸ್ಯರಾದ ಎಂ. ಕೆ. ಮಾಧವ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಅಧ್ಯಕ್ಷರಾದ ಮಂಜುನಾಥ ರೇವಣ್ಕರ್, ಪ್ರಕಾಶಕರು, ಆಕೃತಿ ಆಶಯ ಪಬ್ಲಿಕೇಷನ್ಸ್ ಮಂಗಳೂರು ಇದರ ಕಲ್ಲೂರು ನಾಗೇಶ್ ಹಾಗೂ ಕೃತಿಕಾರರಾದ ಶ್ರೀಮತಿ ಸುಖಲಾಕ್ಷಿ ವೈ. ಸುವರ್ಣ ಮಂಗಳೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

