ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಕಾರ್ಯಕ್ರಮವನ್ನು ದಿನಾಂಕ 27 ಡಿಸೆಂಬರ್ 2024ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ 121ನೆಯ ಜಯಂತಿಯ ಅಂಗವಾಗಿ ‘ಮಲೆಗಳಲ್ಲಿ ಮದುಮಗಳು’ ಮಹಾಕಾದಂಬರಿಯ ಮೆಲುಕು ಹಾಕುವವರು ಕುವೆಂಪು ಅವರ ಪ್ರಿಯ ಶಿಷ್ಯ ಪಂಪ ಪ್ರಶಸ್ತಿ ಪುರಸ್ಕೃತರಾದ ಡಾ. ಸಿ.ಪಿ. ಕೃಷ್ಣ ಕುಮಾರ್ ಇವರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಇವರು ಅಧ್ಯಕ್ಷತೆ ವಹಿಸಲಿದ್ದು, ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷರಾದ ಶ್ರೀ ಎಂ. ಚಂದ್ರಶೇಖರ್ ಇವರು ನಿರೂಪಣೆ ಮಾಡಲಿರುವರು.