ಮಡಿಕೇರಿ. ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಕಳೆದ 19 ವರ್ಷಗಳಿಂದ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಬಂದಿದೆ.
ಈ ಬಾರಿ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವು 16 ಜನವರಿ 2025ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದ್ದು, ಕಥೆ, ಕವನ ಹಾಗೂ ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ. ಭಾಗವಹಿಸುವವರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆ ಮಾಡಲಾಗುವುದು. ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪಿ. ಕೇಶವ ಕಾಮತ್ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಓದುವ ತರಗತಿ, ಶಾಲೆ, ಪುಸ್ತಕ ಪ್ರಕಟವಾಗಿದ್ದರೆ ಮಾಹಿತಿ, ಇದುವರೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಂಡಿದ್ದರೆ ಆ ಎಲ್ಲಾ ಮಾಹಿತಿಯೊಂದಿಗೆ ತಕ್ಷಣ ಕಳುಹಿಸಬಹುದಾಗಿದೆ.
ವಿಳಾಸ – ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ.
ಹೆಚ್ಚಿನ ಮಾಹಿತಿಗಾಗಿ : 9449552795 ಇವರಿಗೆ ತಲುಪಿಸಲು ಕೋರುತ್ತೇವೆ.
Subscribe to Updates
Get the latest creative news from FooBar about art, design and business.
ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯ, ಗಡಿನಾಡು ಕನ್ನಡದ ಮಕ್ಕಳಿಗೆ ಆಹ್ವಾನ | ಜನವರಿ 16
No Comments1 Min Read