ಸುರತ್ಕಲ್ : ಯಕ್ಷಗಾನ ಮತ್ತು ಲಲಿತಕಲಾ ಅಧ್ಯಯನ ಕೇಂದ್ರ ಮತ್ತು ಗೋವಿಂದ ದಾಸ ಕಾಲೇಜು ಸುರತ್ಕಲ್ ಇವರು ಜಂಟಿಯಾಗಿ ಆಯೋಜಿಸುವ ‘ನೀನಾಸಂ ತಿರುಗಾಟ 2024 ನಾಟಕೋತ್ಸವ’ವನ್ನು ದಿನಾಂಕ 18 ಮತ್ತು 19 ಜನವರಿ 2025ರಂದು ಪ್ರತಿದಿನ ಸಂಜೆ 6-50 ಗಂಟೆಗೆ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ದಿನಾಂಕ 18 ಜನವರಿ 2025ರಂದು ಭವಭೂತಿ ರಚನೆ ಹಾಗೂ ಅಕ್ಷರ ಕೆ.ವಿ. ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಮಾಲತಿ ಮಾಧವ’ ಮತ್ತು ದಿನಾಂಕ 19 ಜನವರಿ 2025ರಂದು ಅಭಿರಾಮ್ ಭಡ್ಕಮ್ಕರ್ ರಚಿಸಿರುವ ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿರುವ ವಿದ್ಯಾನಿಧಿ ವನಾರಸೆ ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಅಂಕದ ಪರದೆ’ ನಾಟಕ ಪ್ರದರ್ಶನಗೊಳ್ಳಲಿದೆ.