ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿನಾಂಕ 21 ಮತ್ತು 22 ಫೆಬ್ರವರಿ 2025ರಂದು ನಡೆಯಲಿರುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದು, ಆಸಕ್ತ ಲೇಖಕರು/ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮ್ಮೇಳನವು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದ್ದು, ಯಾವುದೇ ಪ್ರಕಾರದ ಕನ್ನಡ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಆಸಕ್ತರು ವಿವರಗಳಿಗೆ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಕುಂಬ್ಳೆ ಸಂಪರ್ಕ 8310300875 ಇವರನ್ನು 22 ಜನವರಿ 2025ರ ಮುಂಚಿತವಾಗಿ ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ.