ಕಾಸರಗೋಡು : ಸಂಘಟಕ, ಪತ್ರಕರ್ತ, ಚಿತ್ರನಟ ಹಾಗೂ ಸಾಹಿತಿಯಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲೆಯ ಜಿಲ್ಲಾ ಘಟಕದ, ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿ, ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಹಾಗೂ ನಿರ್ದೇಶಕರಾದ ಡಾ. ಕೊಳಚಪ್ಪೆ ಗೋವಿಂದ ಭಟ್ ಅನುಮೋದಿಸಿದರು.
ಸರ್ವಾನುಮತಿಯೊಂದಿಗೆ ಆಯ್ಕೆಯಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ, 20,000 ಪುಸ್ತಕಗಳುಳ್ಳ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ ‘ಉಚಿತ ವಸತಿ ಸೌಕರ್ಯ’, ‘ಪ್ರತಿ ಮನೆಗೊಂದು ಗ್ರಂಥಾಲಯ’, ‘ಪುಸ್ತಕವೇ ಸತ್ಯ – ಪುಸ್ತಕವೇ ನಿತ್ಯ’ ಎಂಬ ನೂತನ ಜನಾಂದೋಲನ ಕಾರ್ಯಕ್ರಮ ಹಾಗೂ ರಜತ ಸಂಭ್ರಮದ ವಿಶೇಷ ಕಾರ್ಯಕ್ರಮ ಸಂಘಟನೆ, ಸಂಯೋಜನೆಯಲ್ಲಿ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವೃತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್, ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಬೊಳ್ಳಜಿರ ಬಿ. ಅಯ್ಯಪ್ಪ ಇವರು ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆ.
No Comments1 Min Read
Previous Articleನೈಜ ಪ್ರತಿಭೆಯ ಪ್ರೋತ್ಸಾಹ ಸಮಾಜದ ಕರ್ತವ್ಯ