ನಾಪೋಕ್ಲು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಬೇತು ನ್ಯಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ 2024 25ನೇ ಸಾಲಿನ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿ ಮತ್ತು ಶ್ರೀ ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2025 ಶನಿವಾರ ಬೆಳಿಗ್ಗೆ 10-30 ಗಂಟೆಗೆ ನಾಪೋಕ್ಲಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೆರವಂಡ ಉಮೇಶ್ ಇವರು ವಹಿಸಲಿದ್ದು, ಪ್ರಾಸ್ತಾವಿಕವಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಮಾತನಾಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಅಧ್ಯಕ್ಷರಾದ ಶ್ರೀ ಕುಟ್ಟಂಜೆಟ್ಟಿರ ಮಾದಪ್ಪ ಇವರು ನೆರವೇರಿಸಲಿದ್ದಾರೆ.
ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿಯ ಉಪನ್ಯಾಸದಲ್ಲಿ ಬಲಮುರಿ ಗ್ರಾಮದ ನಿವೃತ್ತ ಶಿಕ್ಷಕರಾದ ಶ್ರೀ ತಿಮ್ಮಯ್ಯ ಸಿ.ಕೆ.ಯವರು ‘ಕೊಡಗಿನ ಸಾಹಿತಿಗಳು, ಸಾಹಿತ್ಯ, ಜನರಲ್ ಕಾರ್ಯಪ್ಪ ಹಾಗೂ ತಿಮ್ಮಯ್ಯ’ ಕುರಿತು ಮಾತನಾಡಲಿದ್ದಾರೆ. ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸದಲ್ಲಿ ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ, ಕನ್ನಡ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಡಿ. ಇವರು ‘ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ’ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ನಾಪೋಕ್ಲು ಎಕ್ಸಲ್ ಶಾಲೆಯ ಮುಖ್ಯ ಶಿಕ್ಷಕರಾದ ಚೋಕಿರ ತಮ್ಮಯ್ಯ, ಎಕ್ಸಲ್ ಶಾಲೆ ವಕ್ತಾರರು ಶ್ರೀಮತಿ ವಿದ್ಯಾ ಸುರೇಶ್, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಸಿ.ಎಸ್. ಸುರೇಶ್ ಭಾಗವಹಿಸಲಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ.