ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಯಶವಂತಪುರ ಕ್ಷೇತ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಜನರೆಡೆಗೆ ಕಾವ್ಯ ಕಾರ್ಯಕ್ರಮದ ಏಳನೇ ಕಾವ್ಯಯಾನವನ್ನು ದಿನಾಂಕ 26 ಜನವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಗುರುರಾಜ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಕವಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್.ಎನ್. ಮುಕುಂದರಾಜು ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಹಿರಿಯ ಕವಯತ್ರಿ ಡಾ. ವಿಜಯಶ್ರೀ ಸಬರದ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 11-30 ಗಂಟೆಗೆ ಕವಿಗೋಷ್ಠಿ -01 ಡಾ. ಹೆಚ್. ಬಸ್ಸೀನಾರಾಯಣ ಸ್ವಾಮಿ ಹಾಗೂ ಮಧ್ಯಾಹ್ನ 1-30 ಗಂಟೆಗೆ ಕವಿಗೋಷ್ಠಿ -02 ಡಾ. ಜಯಶ್ರೀ ಕಂಬಾರ ಇವರುಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಜೆ 4-00 ಗಂಟೆಗೆ ಸರ್ವಾಧ್ಯಕ್ಷರೊಂದಿಗೆ ಸಂವಾದ, ಹಾಡುಗಾರರಿಂದ ‘ಪದ-ಪಾದ’ ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.