ಮಂಗಳೂರು : ತುಳುಕೂಟ (ರಿ.) ಕುಡ್ಲ ಇದರ ‘ಬಂಗಾರ್ ಪರ್ಬ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 09 ಮಾರ್ಚ್ 2025ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಖಾವಂದರಾದ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ದಿನಾಂಕ 03 ಜನವರಿ 2025ರಂದು ಬಿಡುಗಡೆಗೊಳಿಸಿದರು.
ತುಳುಕೂಟ (ರಿ.) ಕುಡ್ಲದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಉಪಾಧ್ಯಕ್ಷ ಜೆ.ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ನಾಗೇಶ ದೇವಾಡಿಗ ಕದ್ರಿ, ನಾರಾಯಣ ಬಿ.ಡಿ., ವಿಶ್ವನಾಥ ಸೋಣಳಿಕೆ, ಜಗದೀಶ್ ಬೆಂಗಳೂರು ಹಾಗೂ ಕೂಟದ ಸದಸ್ಯರು ಉಪಸ್ಥಿತರಿದ್ದರು.