ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿರುವ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಡಾ. ವಾಮನ್ ರಾವ್ ಬೇಕಲ್ ಅವರ ಸ್ಥಾಪಕ ಸಂಚಾಲಕತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಇದರ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 02 ಫೆಬ್ರವರಿ 2025ರ ಭಾನುವಾರದಂದು ನಡೆಯಿತು.
ಕನ್ನಡ ಪುಸ್ತಕ ಪ್ರಾಧಿಕಾರ ಕರ್ನಾಟಕ ಸರಕಾರ ಇದರ ಅಧ್ಯಕ್ಷರಾದ ಡಾ.ಮಾನಸ ಮೈಸೂರು ಇವರು ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ, ಕನ್ನಡ ಧ್ವಜವನ್ನು, ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಪತ್ರಕರ್ತ, ಸಾಹಿತಿ ವಿರಾಜ್ ಅಡೂರು ಅವರಿಗೆ ಹಸ್ತಾಂತರಿಸುವ ಮೂಲಕ ಪರಿಷತ್ತಿಗೆ ಚಾಲನೆ ನೀಡಿದರು.
ಶಿಕ್ಷಣ ತಜ್ಞ ವಿ. ಬಿ. ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಪತ್ರಕರ್ತ ಹಾಗೂ ಸಾಹಿತಿಗಳಾದ ಜಯಾನಂದ ಪೆರಾಜೆ ಹಾಗೂ ಶಿಕ್ಷಕಿ ಡಾ. ಶಾಂತ ಪುತ್ತೂರು ಇವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಸಭೆಯಲ್ಲಿ ಕ. ಸಾ. ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲರಾದ ಪ್ರೋ. ಪಿ. ಎನ್. ಮೂಡಿತ್ತಾಯ, ನಿವೃತ್ತ ಶಿಕ್ಷಕರಾದ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿ ನಾಯ್ಕಾಪು, ಸಾಹಿತಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕರಾದ ಪ್ರೋ. ಎ. ಶ್ರೀನಾಥ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಭಾಷಿಣಿ ಚಂದ್ರ ಕನ್ನಟಿಪ್ಪಾರೆ ಪ್ರಾರ್ಥಿಸಿ, ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರು ಪರಿಷತ್ತಿನ ಕಾರ್ಯ ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕ. ಸಾ. ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿ, ಕೆ ನರಸಿಂಹ ಭಟ್ ಏತಡ್ಕ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ಚುಟುಕು ಸಾಹಿತಿ ವಿರಾಜ್ ಅಡೂರು ಇವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು. ಸುಮಾರು 22ಕ್ಕೂ ಮಿಕ್ಕಿದ ಕವಿಗಳು ಚುಟುಕು ವಾಚನ ಗೋಷ್ಠಿಯಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.