ಉಡುಪಿ: ಅಂಚೆ ಇಲಾಖೆಯ ವತಿಯಿಂದ ಯು. ಪಿ. ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಶನ್ ಪ್ರಯುಕ್ತ 9 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಇಮ್ಯಾಜಿನ್ ಯು ಆರ್ ದ ಓಷನ್. ರೈಟ್ ಎ ಲೆಟರ್ ಟು ಸಮ್‌ಒನ್ ಎನಿಂಗ್ ವೈ ಅಂಡ್ ಹೌ ದೇ ಶುಡ್ ಟೇಕ್ ಗುಡ್ ಕೇರ್ ಆಫ್ ಯು ವಿಷಯದ ಕುರಿತು ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈಬರಹದಲ್ಲಿ ನಿಗದಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ 20 ಫೆಬ್ರವರಿ 2025ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ-576101 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರ ಲೇಖನಗಳಿಗೆ ಬಹುಮಾನಗಳನ್ನು ದೇಶೀಯ ರೂಪಾಯಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 . ನೀಡಲಾಗುವುದು ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
Previous Articleಬ್ಯಾರಿ ಬರಹಗಾರರ ಸ್ನೇಹಕೂಟ | ಫೆಬ್ರವರಿ 14
Next Article ವಿಶೇಷ ಲೇಖನ – ಭಾರತೀಯ ಸೃಜನಶೀಲ ನಟಿ ಭಾರ್ಗವಿ ನಾರಾಯಣ್