ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮತ್ತು ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಗೊಂಬೆ ತಯಾರಿ ತರಬೇತಿಯನ್ನು ದಿನಾಂಕ 14 ಫೆಬ್ರವರಿ 2025 ಮತ್ತು 15 ಫೆಬ್ರವರಿ 2025ರಂದು ಬೆಳಿಗ್ಗೆ 9-00ರಿಂದ ಸಂಜೆ 5-30ರ ತನಕ ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿಯಿರುವ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಉಡುಪಿ ಜಿಲ್ಲೆಯ ಮೊದಲು ನೋಂದಾಯಿಸಿದ 30 ಮಂದಿ ಸಾರ್ವಜನಿಕರಿಗೆ ಮಾತ್ರ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು 9663632910 ಮತ್ತು ಪ್ರಬಂಧಕರು 9743156275 ಈ ಸಂಖ್ಯೆಯನ್ನು ಸಂಪರ್ಕಿಸಿರಿ.