ಮಂಗಳೂರು : ಮಂಗಳೂರಿನ ಕಲಾ ಸಾಧನ ಸಂಸ್ಥೆಯು ಮಂಗಳೂರಿನ ಸ್ವಸ್ತಿಕ ನ್ಯಾಶನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಆಯೋಜಿಸುವ ‘ಸ್ವರ ಸಾನ್ನಿಧ್ಯ’ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮವು ದಿನಾಂಕ 08 ಫೆಬ್ರವರಿ 2025ರಂದು ಮಂಗಳೂರಿನ ಟಿ. ಎಂ. ಎ. ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ಇಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ ಘಂಟೆ 8.00ಕ್ಕೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಬೆಳಗ್ಗೆ 8.40ರಿಂದ 9.30ರ ವರೆಗೆ ವಿಭಾ ಎಸ್. ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ ಇವರಿಗೆ ತಬಲಾದಲ್ಲಿ ವಿಘ್ನೇಶ್ ಪ್ರಭು, ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ. ಬಳಿಕ 9.40ರಿಂದ 10.30ರ ವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು ಇವರಿಂದ ಕೊಳಲು ವಾದನ, 10.40ರಿಂದ 11.30ರ ವರೆಗೆ ಆತ್ರೇಯಾ ಗಂಗಾಧರ್ ಇವರಿಂದ ಗಾಯನ ನಡೆಯಲಿದೆ. 11.40ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಕಾರ್ಯಕ್ರಮ, ಸಂಜೆ ಘಂಟೆ 5.00ಕ್ಕೆ ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನ ನಡೆಯಲಿದ್ದು, 5.45ರಿಂದ 7ರ ವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ, 7.15ರಿಂದ 8.30ರ ವರೆಗೆ ಕೋಲ್ಕತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ.