ಬೆಂಗಳೂರು : ಸಂಸ ಥಿಯೇಟರ್ ಬೆಂಗಳೂರು ಇದರ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯದ ಮಾನ್ಯತೆ ಪಡೆದಿರುವ ‘ಸಂಸ ರಂಗಶಿಕ್ಷಣ ಕೇಂದ್ರ’ದ ವತಿಯಿಂದ ಒಂದು ವರ್ಷದ ಥಿಯೇಟರ್ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ರಂಗಾಸಕ್ತರಿಗೆ ಒಂದು ವರ್ಷದ ಅಭಿನಯ ಹಾಗೂ ರಂಗಭೂಮಿಯ ವಿವಿಧ ಪ್ರಕಾರಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು. ಪ್ರತಿದಿನ ಸಂಜೆ ಹಾಗೂ ಶನಿವಾರ ಮತ್ತು ಭಾನುವಾರ ತರಗತಿಗಳು ನಡೆಯುತ್ತವೆ. ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಳಿಗೆ 9742067427 ಮತ್ತು 8050643467 ಸಂಖ್ಯೆಯನ್ನು ಸಂಪರ್ಕಿಸಿರಿ.