ಪುತ್ತೂರು: ಇಲಿ ಜ್ವರದಿಂದ ಬಳಲುತ್ತಿದ್ದ ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿ ಗ್ರಾಮದ ಕೇಕನಾಜೆ ನಿವಾಸಿಯಾಗಿರುವ ಯಕ್ಷಗಾನ ಕಲಾವಿದ ಪ್ರದೀಪ್ ರೈ ಕೆ. ಇವರು ಮಂಗಳೂರಿನ ಆಸ್ಪತ್ರೆಯಲ್ಲಿ ದಿನಾಂಕ 07 ಫೆಬ್ರವರಿ 2025ರ ಶುಕ್ರವಾರದಂದು ನಿಧನರಾದರು. ಇವರಿಗೆ 54 ವರ್ಷ ವಯಸ್ಸಾಗಿತ್ತು.
ವಿದ್ಯಾರ್ಥಿ ದೆಸೆಯಲ್ಲೇ ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಮಂಗಳಾದೇವಿ ಯಕ್ಷಗಾನ ಮೇಳ, ನಾಳ ದುರ್ಗಾ ಪರಮೇಶ್ವರಿ ಯಕ್ಷಗಾನ ಮೇಳಗಳಲ್ಲಿ ವೇಷಧಾರಿಯಾಗಿ ಕಾರ್ಯನಿರ್ವಹಿಸಿದ್ದರು. ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮಗಳಲ್ಲಿ ಅರ್ಥಧಾರಿಯಾಗಿ, ಸಂಘಟಕರಾಗಿ ಮತ್ತು ಯಕ್ಷಗಾನ ನಾಟ್ಯ ಗುರುಗಳಾಗಿಯೂ ಗುರುತಿಸಿಕೊಂಡಿದ್ದರು. ಬೆಟ್ಟಂಪಾಡಿಯ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಶ್ರೀಯುತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.
Subscribe to Updates
Get the latest creative news from FooBar about art, design and business.
Next Article ವಿಶೇಷ ಲೇಖನ | ಜಾನಪದ ಲೋಕದ ರೂವಾರಿ ಎಚ್.ಎಲ್. ನಾಗೇಗೌಡ