ಮೈಸೂರು : ಚೇತನ ಫೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು, ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮವನ್ನು ದಿನಾಂಕ 16 ಫೆಬ್ರವರಿ 2025ರಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ, ಕಲೆ, ಸಾಹಿತ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಚಿಂತನ-ಮಂಥನ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9986821096 ಸಂಖ್ಯೆಯನ್ನು ಸಂಪರ್ಕಿಸಿರಿ.