ವಿಜಯಪುರ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಿಜಯಪುರ ಜಿಲ್ಲಾ ಗಮಕ ಕಲಾ ಪರಿಷತ್ತು ಹಾಗೂ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಕುಮಾರವ್ಯಾಸ ಜಯಂತಿ ಪ್ರಯುಕ್ತ ‘ಗಮಕ ವಾಚನ – ವ್ಯಾಖ್ಯಾನ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ’ವನ್ನು ದಿನಾಂಕ 17 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ವಿಜಯಪುರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರದ ಖ್ಯಾತ ಇತಿಹಾಸ ಸಂಶೋಧಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಇವರು ವಹಿಸಲಿದ್ದು, ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ಇವರು ಉದ್ಘಾಟನೆ ಮಾಡಲಿದ್ದಾರೆ. ವಾಚನವನ್ನು ಶ್ರೀಮತಿ ಪುಷ್ಪಾ ಕುಲಕರ್ಣಿ ಮತ್ತು ವ್ಯಾಖ್ಯಾನವನ್ನು ಶ್ರೀ ಕಲ್ಯಾಣರಾವ್ ದೇಶಪಾಂಡೆ ಇವರು ನಿರ್ವಹಿಸಲಿರುವರು.