ಮಂಗಳೂರು : ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಯೋಗದಲ್ಲಿ ‘ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ -2025’ವನ್ನು ದಿನಾಂಕ 21 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಾನ್ನಿಧ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಾಹಿತಿಗಳು, ಪ್ರಕಾಶಕರಾದ ಡಾ. ವಾಮನ ನಂದಾವರ ಮತ್ತು ಶ್ರೀಮತಿ ಚಂದ್ರಕಲಾ ನಂದಾವರ ಇವರು 2024ನೆಯ ಸಾಲಿನ ಪ್ರಶಸ್ತಿ ಪುರಸ್ಕೃತರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಿ. ಶ್ರೀಕೃಷ್ಣ ಭಟ್ ಇವರು 2025ನೆಯ ಸಾಲಿನ ಪ್ರಶಸ್ತಿ ಪುರಸ್ಕೃತರು. ಈ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ವಿ.ಪಿ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎ. ವಿವೇಕ ರೈ ಇವರು ವಹಿಸಲಿದ್ದು, ಸಂತ ಅಲೋಶಿಯಸ್ ಸ್ವಾಯತ್ತ ಮಹಾವಿದ್ಯಾಲಯದ ಕುಲಸಚಿವರಾದ ಡಾ. ಅಲ್ವಿನ್ ವಿ. ಡೆ’ಸಾ ಇವರು ಶುಭಾಶಂಸನೆ ಗೈಯಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಂಕಿತ ಪುಸ್ತಕ ಬೆಂಗಳೂರು ಪ್ರಾಯೋಜಕತ್ವದಲ್ಲಿ ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಮತ್ತು ಶ್ರೀಮತಿ ಜಯಲಕ್ಷ್ಮಿ ಶಾಸ್ತ್ರಿ ಇವರಿಂದ ಎಸ್.ವಿ.ಪಿ. ಗೀತ ಗಾಯನ ಪ್ರಸ್ತುತಗೊಳ್ಳಲಿದೆ.