ಬೆಂಗಳೂರು : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ರೋಟರಿ ಕ್ಲಬ್ ಮತ್ತು ರಿಚ್ ಮಂಡ್ ಟೌನ್ ಬೆಂಗಳೂರು ಇವುಗಳ ಸಹಯೋಗದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಲ್ಲಿ ಭಾವಜೀವಿ ಡಾ. ಬಿ.ಎಸ್. ಮಂಜುನಾಥ್ ಇವರ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 25 ಫೆಬ್ರವರಿ 2025ರಂದು ಬೆಳಿಗೆ 9-30 ಗಂಟೆಗೆ ಬೆಂಗಳೂರಿನ ಕೆ.ಆರ್. ವೃತ್ತ, ಕಬ್ಬನ್ ಪಾರ್ಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡ, ಮೇರಿ ದೇವಾಸಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಾಡಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾವೇದಿಕೆ ಇದರ ಅಧ್ಯಕ್ಷರಾದ ಪಿ. ಶಿವಕುಮಾರ್ ಇವರ ಅಧ್ಯಕ್ಷತೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕರಾದ ಶ್ರೀಮತಿ ಲಕ್ಷ್ಮೀದೇವಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ. ಶ್ರೀಮತಿ ಆರ್. ಅಂಬುಜಾಕ್ಷಿ ಬೀರೇಶ್ ತಂಡದವರಿಂದ ಜಾನಪದ ಗೀತಗಾಯನ, ಸರಿಗಮಪ ಸ್ಪರ್ಧಿ ನಾಗರಾಜ ತುಂಬ್ರಿರವರಿಂದ ಗಾಯನ, ಇಂಡಿಯನ್ ಪ್ರೈಮರಿ ಅಂಡ್ ಹೈಸ್ಕೂಲ್ ಮಕ್ಕಳಿಂದ ಕಾರ್ಯಕ್ರಮಗಳು ಹಾಗೂ ಸುಡುಗಾಡು ಸಿದ್ದ ಅಲೆಮಾರಿ ಜಾನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ 12-00 ಗಂಟೆಗೆ ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. 1-30 ಗಂಟೆಗೆ ನಿವೃತ್ತ ಪ್ರಾಧ್ಯಾಪಕರಾದ ಡಾ. ಪ್ರಧಾನ ಗುರುದತ್ತ ಇವರ ಅಧ್ಯಕ್ಷತೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ ಇವರು ಕೃತಿ ಬಿಡುಗಡೆ ಮಾಡಲಿದ್ದು, ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿಯಾದ ಹೆಚ್.ಸಿ. ಮಧು ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ.