ಮೈಸೂರು : ಮೈಸೂರಿನ ಗ್ರಾಮಾಂತರ ಬುದ್ದಿಜೀವಿಗಳ ಬಳಗದ ವತಿಯಿಂದ ನೀಡಲಾಗುವ ‘ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ’ಗೆ ಬಹಗಾರ್ತಿ, ಚಿತ್ರ ನಿರ್ಮಾಪಕಿ, ನಟಿ ಹಾಗೂ ಸಹನಿರ್ದೇಶಕಿ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 40ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ಇನ್ಸಿ ಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ.23 ಫೆಬ್ರವರಿ 2025 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ರಾಷ್ಟ್ರ ಕವಿ ಕುವೆಂಪು ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಈರಮಂಡ ಹರೀಣಿ ವಿಜಯ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಡಾ. ಭೇರ್ಯ ರಾಮಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಾಹಿತ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸಲಿದ್ದಾರೆ. ಈರಮಂಡ ಹರೀಣಿ ವಿಜಯ್ ಅವರು ಸಾಹಿತ್ಯ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲೂ ಸಕ್ರೀಯಾರಾಗಿರುವ ಇವರು ಕೊಡಗಿನ ಪ್ರತಿಷ್ಠಿತ ‘ಕೊಡಗಿನ ಗೌರಮ್ಮ ದತ್ತಿನಿಧಿ ಪ್ರಶಸ್ತಿ’ ಹಾಗೂ’ ಗೋಪಾಲಕೃಷ್ಣ ದತ್ತಿನಿಧಿ ಪ್ರಶಸ್ತಿ’ಗೂ ಈ ಹಿಂದೆ ಭಾಜರಾಗಿದ್ದರು.
Subscribe to Updates
Get the latest creative news from FooBar about art, design and business.
ಈರಮಂಡ ಹರಿಣಿ ವಿಜಯ್ ಇವರಿಗೆ ‘ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ’ | ಫೆಬ್ರವರಿ 23
No Comments1 Min Read