ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ, ಕಾವ್ಯಮಂಡಲ, ಸ್ನಾತಕೋತ್ತರ ಕೇಂದ್ರ ರಾಮನಗರ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಆಶ್ರಯದಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ ಕಾರ್ಯಕ್ರಮವನ್ನು ದಿನಾಂಕ 26 ಫೆಬ್ರವರಿ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರು ವಿ.ವಿ. ಜ್ಞಾನ ಭಾರತಿ ಆವರಣ, ಡಾ. ವೆಂಕಟಗಿರಿ ಗೌಡ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ ಗಂಟೆ 6-30ಕ್ಕೆ ಬೆಂಗಳೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಡಾ. ಜಯಕರ್ ಎಸ್.ಎಂ. ಇವರ ಅಧ್ಯಕ್ಷತೆಯಲ್ಲಿ ಸಂಸ್ಕೃತಿ ಚಿಂತಕರಾದ ಶೂದ್ರ ಶ್ರೀನಿವಾಸ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸ್ನಾತಕೋತ್ತರ ಕೇಂದ್ರ ರಾಮನಗರದ ನಿರ್ದೇಶಕರಾದ ಪ್ರೊ. ಬಿ. ಗಂಗಾಧರ ಇವರಿಂದ ಕಾವ್ಯ ಶಿವರಾತ್ರಿ ಪ್ರಸ್ತಾವನೆ ನಡೆಯಲಿದೆ. ಅಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರಿಂದ ಮಂಟೇಸ್ವಾಮಿ ಮತ್ತು ಮಲೆ ಮಹಾದೇಶ್ವರ ಮಹಾಕಾವ್ಯ ಗಾಯನ ಪ್ರಸ್ತುತಗೊಳ್ಳಲಿದೆ.