ಬೆಂಗಳೂರು: ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ ದಿನಾಂಕ 25 ಫೆಬ್ರವರಿ 2025ರ ಮಂಗಳವಾರ ಸಂಜೆ ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು.
ಕೆಲಕಾಲದಿಂದ ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ವಿಮಲಾ ರಂಗಾಚಾರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರಿನ ಎಂ. ಇ. ಎಸ್. ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದ ವಿಮಲಾ ರಂಗಾಚಾರ್ ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದವರು. ಕಮಲಾದೇವಿ ಚಟ್ಟೋಪಾಧ್ಯಾಯ ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ವಿಮಲಾ ರಂಗಾಚಾರ್ ಅವರು ಲಲಿತಕಲೆಗಳ ಮಹಾಪೋಷಕಿಯಾಗಿದ್ದರು.
ಮಲ್ಲೇಶ್ವರಂನಲ್ಲಿ ವಾಸವಾಗಿದ್ದ ವಿಮಲಾ ರಂಗಾಚಾರ್ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು ವಿದೇಶದಲ್ಲಿ ನೆಲೆಸಿರುವ ಮಗಳು ರೇವತಿ ಬೆಂಗಳೂರಿಗೆ ಮರಳಿದ ಬಳಿಕ ಗುರುವಾರ ನಗರದಲ್ಲಿ ಮೃತರ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ತಿಳಿದುಬಂದಿದೆ.
Subscribe to Updates
Get the latest creative news from FooBar about art, design and business.