ಉಡುಪಿ : ಆದರ್ಶ ಶಿಕ್ಷಕ, ಕವಿ, ಲೇಖಕ, ಯಕ್ಷಗಾನ ಕಲಾವಿದರಾಗಿದ್ದ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್. ಸಿ. ಮಹೇಶ್ ಇವರ ‘ಸಾಕುತಂದೆ ರೂಮಿ’ ನಾಟಕ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು 15 ಸಾವಿರ ನಗದು ಮತ್ತು ಸನ್ಮಾನ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು 27 ಮಾರ್ಚ್ 2025 ರಂದು ನಡೆಯಲಿದೆ ಎಂದು ರಂಗಭೂಮಿ ಉಡುಪಿಯ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

