ಶಿರಸಿ: ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಏಪ್ರಿಲ್ 12 ಮತ್ತು 13ರಂದು ಕದಂಬೋತ್ಸವ ನಡೆಯಲಿದ್ದು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳು ನಡೆಯಲಿವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
“ಏಪ್ರಿಲ್ 10ರಂದು ಗುಡ್ನಾಪುರ ರಾಣಿ ನಿವಾಸದಲ್ಲಿ ಕದಂಬ ಜ್ಯೋತಿಗೆ ಚಾಲನೆ ಸಿಗಲಿದ್ದು, ಗುಡ್ಡಾಪುರ ಉತ್ಸವ ಕೂಡ ನಡೆಯಲಿದೆ. ಎರಡು ದಿನ ವಿವಿಧೆಡೆ ಸಂಚರಿಸಿ, ಬನವಾಸಿಗೆ ಬರುವ ಕದಂಬ ಜ್ಯೋತಿಯಿಂದ ಕದಂಬೋತ್ಸವವನ್ನು ಮುಖ್ಯಮಂತ್ರಿಯವರು ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಸಾಹಿತಿ ಬಿ. ಎ. ವಿವೇಕ ರೈ ಇವರಿಗೆ ‘ಪಂಪ ಪ್ರಶಸ್ತಿ’ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದರು.
ಶಾಸಕ ಭೀಮಣ್ಣ ನಾಯ್ಕ ಮಾತನಾಡಿ “ಕದಂಬೋತ್ಸವವನ್ನು ಮನೆ ಹಬ್ಬದಂತೆ ಎಲ್ಲರೂ ಆಚರಿಸಬೇಕು” ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಉಪವಿಭಾಗಾಧಿಕಾರಿ ಕೆ. ವಿ. ಕಾವ್ಯಾರಾಣಿ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ತಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.