ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪುತ್ತೂರು ಸಹಕಾರದೊಂದಿಗೆ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಸಂಯೋಜನೆಯಲ್ಲಿ ಕರ್ನಾಟಕ ಸಂಘ ಪುತ್ತೂರು ಆಶ್ರಯದಲ್ಲಿ ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿಯನ್ನು ದಿನಾಂಕ 08 ಮಾರ್ಚ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಪುತ್ತೂರಿನ ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಬಿ. ಪುರಂದರ ಭಟ್ ಇವರು ಈ ಸಮಾರಂಭವನ್ನು ಉದ್ಘಾಟನೆಗೊಳಿಸಲಿರುವರು. ನಾರಾಯಣ ಕುಂಬ್ರರವರ ‘ಹನಿದನಿ’ ಕೃತಿಯನ್ನು ಅಬುದಾಬಿಯ ಮಿತ್ರಂಪಾಡಿ ಜಯರಾಮ ರೈ ಇವರು ಲೋಕಾರ್ಪಣೆಗೊಳಿಸಲಿದ್ದು, ಮಂಗಳೂರು ಕೆನರಾ ಕಾಲೇಜಿನ ರಘು ಇಡ್ಕಿದು ಕೃತಿ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಿತ್ರಂಪಾಡಿ ಜಯರಾಮ ರೈ, ಕುಮಾರಿ ಧನ್ವಿತಾ ಕಾರಂತ್ ಅಳಿಕೆ, ಕುಮಾರಿ ಶಿರ್ಷಿತಾ ಕಾರಂತ್ ಅಳಿಕೆ, ಶ್ರೀ ರಘು ಇಡ್ಕಿದು, ಶ್ರೀಮತಿ ಸುಪ್ರೀತಾ ಚರಣ್ ಪಾಲಪ್ಪೆ ಮತ್ತು ಶ್ರೀ ಮಹೇಶ್ ಆರ್. ನಾಯಕ್ ಇವರುಗಳಿಗೆ ಗೌರವಾಭಿನಂದನೆ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವಿಂಧ್ಯಾ ಎಸ್. ರೈ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.