ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ಯುವಕವಿ ನಾರಾಯಣ ಕುಂಬ್ರ ಇವರ ‘ಹನಿದನಿ’ : ಇದು ಬರಹಗಳ ಮಣಿ ಎಂಬ ಕೃತಿ ದಿನಾಂಕ 08 ಮಾರ್ಚ್ 2025ರಂದು ಪುತ್ತೂರು ಅನುರಾಗ ವಠಾರದ ಅಟ್ಟದಲ್ಲಿ ಲೋಕಾರ್ಪಣೆಗೊಂಡಿತು.
ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷರು ಹಿರಿಯರಾದ ಬಿ. ಪುರಂದರ ಭಟ್ ಇವರ ಆಶೀರ್ವಾದದೊಂದಿಗೆ ಪುತ್ತೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದಾನ ಶಿಕ್ಷಣ ಸಂಸ್ಥೆಗಳು ನೆಹರು ನಗರ ಇಲ್ಲಿನ ಸಂಚಾಲಕರು ರೆ. ವಿಜಯ ಹಾರ್ವಿನ್ ಇವರ ಅಮೃತ ಹಸ್ತದಿಂದ ಬಿಡುಗಡೆಗೊಂಡಿತು. ಮಂಗಳೂರು ಕೆನರಾ ಕಾಲೇಜಿನ ರಘು ಇಡ್ಕಿದು ಕೃತಿ ಪರಿಚಯ ಮಾಡಿದರು. ಇದೇ ಸಂದರ್ಭದಲ್ಲಿ ಸಾಧಕರಿಗೆ ಗೌರವಾಭಿನಂದನೆ ನೀಡಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವಿಂಧ್ಯಾ ಎಸ್. ರೈ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.