ಪುತ್ತೂರು : ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ (ರಿ.) ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಸಹಭಾಗಿತ್ವದಲ್ಲಿ ಆಯೋಜಿಸುವ ‘ಭರತಮುನಿ ಜಯಂತಿ’ ಕಾರ್ಯಕ್ರಮವು ದಿನಾಂಕ 16 ಮಾರ್ಚ್ 2025ರ ಆದಿತ್ಯವಾರದಂದು ಪುತ್ತೂರು ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸೇವಾ ಸಮಾಜ (ರಿ.) ಇಲ್ಲಿ ನಡೆಯಲಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಈಶ್ವರ ಭಟ್ ಪಂಚಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶಾಂತಲಾ ಪ್ರಶಸ್ತಿ ಪುರಸ್ಕೃತರು ನಾಟ್ಯಗುರು ಉಳ್ಳಾಲ ಮೋಹನ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ದೀ ಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇದರ ಸಂಚಾಲಕರಾದ ಶ್ರೀಮತಿ ಪದ್ಮ ಕೆ. ಆರ್. ಆಚಾರ್ಯ ಭಾಗವಹಿಸಲಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಯುಗಳ ನೃತ್ಯ ಕಾರ್ಯಕ್ರಮ ನಡೆಯಲಿದೆ.


