ಬೆಂಗಳೂರು : ಜಾಣಗೆರೆ ಪತ್ರಿಕೆ ಪ್ರಕಾಶನ ಇದರ ವತಿಯಿಂದ ಸಾಹಿತಿ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಇವರ ‘ನುಡಿಗೋಲು 2’ ಅಪೂರ್ವ ಸಾಧಕರ ನುಡಿ ಸಂಕಥನ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 15 ಮಾರ್ಚ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾಹಿತಿ ಡಾ. ಅಗ್ರಹಾರ ಕೃಷ್ಣಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಬಿ.ಎಂ. ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಬೈರಮಂಗಲ ರಾಮೇಗೌಡ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ಕವಿ ಚಿಂತಕರಾದ ಡಾ. ಬಂಜಗೆರೆ ಜಯಪ್ರಕಾಶ್ ಇವರು ಕೃತಿ ಪರಿಚಯ ಮಾಡಲಿರುವರು. ಸಭಾ ಕಾರ್ಯಕ್ರಮದ ಮೊದಲು ಲಿಮ್ಕಾ ದಾಖಲೆಯ ಡಾ. ಬಂಡ್ಲಹಳ್ಳಿ ವಿಜಯಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ ಪ್ರಸ್ತುತಗೊಳ್ಳಲಿದೆ.