ಧಾರವಾಡ : ಕನ್ನಡದ ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ,ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ. ಡಾ.ಪಂಚಾಕ್ಷರಿ ಹಿರೇಮಠ ಇವರು ದಿನಾಂಕ 14 ಮಾರ್ಚ್ 2025 ರಂದು ಧಾರವಾಡದ ಜಯನಗರದಲ್ಲಿನ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಡಾ.ಪಂಚಾಕ್ಷರಿ ಹಿರೇಮಠ ಅವರು ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 6 ಜನವರಿ 1933ರಂದು ಜನಿಸಿದ್ದಾರೆ. ನಿಜವಾದ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಕವಿ, ಬಹುಭಾಷಾ ವಾಗ್ಮಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ ಎಂದು ಹೆಸರುವಾಸಿಯಾಗಿದ್ದಾರೆ.
ವಿದ್ಯಾವಾಚಸ್ಪತಿ ಬಿರುದಾಂಕಿತರಾದ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊಂಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ.
ಶ್ರೀಯುತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಸಂಖ್ಯೆಯ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಕಾಸರಗೋಡು ಜಿಲ್ಲಾ ಚುಟುಕು ಸ್ಪರ್ಧೆಗೆ ಆಹ್ವಾನ | ಏಪ್ರಿಲ್ 15