ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ನಾ ಡಿಸೋಜಾ ದತ್ತಿ ನಿಧಿ ಕಾರ್ಯಕ್ರಮವು ದಿನಾಂಕ 20 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ವಹಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಇವರು ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ. ವಿರಾಜಪೇಟೆಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ. ದಯಾನಂದ ಇವರು ಉದ್ಘಾಟನೆಯನ್ನು ನಡೆಸಲಿದ್ದು, ದತ್ತಿ ಉಪನ್ಯಾಸಕರಾಗಿ ಗಾಳಿಬೀಡು ನವೋದಯ ವಿದ್ಯಾಲಯ ಉಪನ್ಯಾಸಕರು ಹಾಗೂ ಸಾಹಿತಿ ಮಾರುತಿ ದಾಸಣ್ಣನವರ್ ಇವರು ಭಾಗವಹಿಸಲಿರುವರು. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಉಪವಿಭಾಗದ ಪೋಲೀಸ್ ಉಪ ಅಧೀಕ್ಷಕರು ಎಸ್. ಮಹೇಶ್ ಕುಮಾರ್, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ.ಪಿ. ರಾಜೇಶ್, ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಬಸವರಾಜು ಕೆ., ಪ್ರಥಮ ದರ್ಜೆ ಕಾಲೇಜು ಸಹ ಪ್ರಾದ್ಯಾಪಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಶ್ರೀ ರಘುರಾಜ್, ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾದ ಡಾ. ಪ್ರಭು ಡಿ. ಇವರು ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ತಿಳಿಸಿದ್ದಾರೆ.