ಬೆಳ್ತಂಗಡಿ : ಯತಿಶ್ರೇಷ್ಠರಾದ ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಯಕ್ಷವಿದ್ಯಾ ಮಾನ್ಯ’ ಪ್ರಶಸ್ತಿಗೆ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದ, ಧರ್ಮಸ್ಥಳ ಮೇಳದ ಅಗ್ರಮಾನ್ಯ ಕಲಾವಿದರಾಗಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸೂರಿಕುಮೇರು ಕೆ. ಗೋವಿಂದ ಭಟ್ ಆಯ್ಕೆಯಾಗಿದ್ದಾರೆ.
ಕೂಡ್ಲು, ಇರಾ, ಸುರತ್ಕಲ್ ಮತ್ತು ದೀರ್ಘಕಾಲ ಧರ್ಮಸ್ಥಳ ಮೇಳದಲ್ಲಿ ಪ್ರಧಾನ ವೇಷಧಾರಿಯಾಗಿ ಒಟ್ಟು ಸುಮಾರು ಆರುವರೆ ದಶಕಗಳಿಗೂ ಅಧಿಕ ಕಾಲ ಯಕ್ಷ ತಿರುಗಾಟ ನಡೆಸಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿರುವ ಇವರು ಹಲವು ಪೌರಾಣಿಕ ಪಾತ್ರಗಳನ್ನು ಅಪೂರ್ವವಾಗಿ ಚಿತ್ರಿಸಿದ್ದಾರೆ. ಯಕ್ಷಗುರುಗಳಾಗಿ ನೂರಾರು ವಿದ್ಯಾರ್ಥಿಗಳನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಇವರಿಗೆ 10 ಏಪ್ರಿಲ್ 2025ರಂದು ಪಲಿಮಾರು ಮೂಲಮಠದಲ್ಲಿ ನಡೆಯಲಿರುವ ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವದ ಸಂದರ್ಭ ‘ಯಕ್ಷವಿದ್ಯಾ ಮಾನ್ಯ’ ಪುರಸ್ಕಾರವನ್ನು ಪ್ರಶಸ್ತಿ ಫಲಕ ಮತ್ತು ರೂ. 50,000 ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ` ದಿವಾನರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಎಂ. ಜಿ. ಎಂ. ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಮಾತುಕತೆ