ಬೆಂಗಳೂರು : ಸ್ವಾಭಿಮಾನಿ ಕರ್ನಾಟಕ ವೇದಿಕೆಯು ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ 2024ರಲ್ಲಿ ಪ್ರಕಟಗೊಂಡ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ 4 ಪ್ರಕಾರದ, 4 ಕೃತಿಗಳಿಗೆ (ಒಂದು ಡಾ. ಸಿ. ಸೋಮಶೇಖರ, ಸರ್ವಮಂಗಳ ಸಾಹಿತ್ಯ ಸೇವಾ ಪ್ರತಿಷ್ಠಾನ (ರಿ) ಬೆಂಗಳೂರು, ದತ್ತಿ ಪ್ರಶಸ್ತಿ) ಕತೆ, ಕಾದಂಬರಿ, ಕವಿತೆ, ಲೇಖನ, ಮಕ್ಕಳ ಸಾಹಿತ್ಯ, ನಾಟಕ ಇತ್ಯಾದಿಯಾಗಿ ತಲಾ 5,000 ರೂ. ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಪುಸ್ತಕದ ಮೂರು ಪ್ರತಿಗಳನ್ನು ದಿನಾಂಕ 10 ಮೇ 2025ರ ಒಳಗಾಗಿ ಕಳುಹಿಸಬೇಕು ಎಂದು ವೇದಿಕೆಯ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ ತಿಳಿಸಿದ್ದಾರೆ.
ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ದ್ವಾರನಕುಂಟೆ ಪಾತಣ್ಣ, ಅಧ್ಯಕ್ಷರು ಸ್ವಾಭಿಮಾನಿ ಕರ್ನಾಟಕ ವೇದಿಕೆ, ನಂ.118, ಹೊಂಬೆಳಕು, ಹೆಚ್. ಎಂ. ಟಿ. ಲೇ ಔಟ್, ನಾಗಸಂದ್ರ ಅಂಚೆ, ಬೆಂಗಳೂರು 560073.