ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ 2023ನೇ ಸಾಲಿನ ‘ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆಯವರು ಆಯ್ಕೆಯಾಗಿದ್ದಾರೆ. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಹೆಗ್ಗಡೆಯವರನ್ನು ದಿನಾಂಕ 24 ಏಪ್ರಿಲ್ 2025ರಂದು ಸನ್ಮಾನಿಸಿ ಗೌರವಿಸಲಾಯಿತು. “ಹಿರಿಯ ಸಂಶೋಧಕ ಎಂ.ಎಂ. ಕಲ್ಬುರ್ಗಿ ಹೆಸರಿನ ಪ್ರಶಸ್ತಿ ತಮಗೆ ಬಂದಿರುವುದು ತುಳುನಾಡಿನ ಸಂಸ್ಕೃತಿ ಅಧ್ಯಯನಕ್ಕೆ ಸಂದ ಗೌರವವಾಗಿದೆ. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಗಳ ಕುರಿತು ಸಂಶೋಧನೆಗೆ ಸಾಕಷ್ಟು ಅವಕಾಶಗಳಿದ್ದು ಯುವಜನತೆ ಆಸಕ್ತಿ ತೋರಿಸಬೇಕು” ಎಂದು ಹೇಳಿದರು.
ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ ಇಂದಿರಾ ಹೆಗ್ಗಡೆಯವರನ್ನು ಅಭಿನಂದಿಸಿದರು. ಕೋಶಾಧಿಕಾರಿ ಜ್ಯೋತಿ ಚೇಲೈರು ವಂದಿಸಿದರು. ಸದ್ರಿ ಪ್ರಶಸ್ತಿಯು ರೂ.75,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.