ಮಂಗಳೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಮೈಸೂರಿನ ಚಾಮರಾಜೇಂದ್ರ ಸರಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಷುವಲ್ ಆರ್ಟ್ಸ್ (ಬಿ. ವಿ. ಎ.)-ನಾಲ್ಕು ವರ್ಷ, ಎಂಟು ಸೆಮಿಸ್ಟರ್‌ಗಳ ಎನ್. ಇ. ಪಿ. ಪದ್ಧತಿಯ ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ. ವಿ. ಎ. ಪದವಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು htts://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ.
Subscribe to Updates
Get the latest creative news from FooBar about art, design and business.