ಕಾಸರಗೋಡು : ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಇದರ ಆಶ್ರಯದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ಶ್ಯಾನುಭೋಗ್ ಇವರ ‘ವ್ಯೂಹ’ ಕಥಾ ಸಂಕಲನ ಬಿಡುಗಡೆ ಸಮಾರಂಭವನ್ನು ದಿನಾಂಕ 02 ಮೇ 2025ರಂದು ಅಪರಾಹ್ನ 2-30 ಗಂಟೆಗೆ ಬಾಯಿಕಟ್ಟೆ ಶ್ರೀ ಅಯ್ಯಪ್ಪ ಮಂದಿರದ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭವನ್ನು ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಇವರು ಉದ್ಘಾಟಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಾರ್ವತಿ ಜಿ. ಐತಾಳ್ ಇವರು ಕೃತಿ ಬಿಡುಗಡೆಗೊಳಿಸಲಿರುವರು. ಹಿರಿಯ ಪತ್ರಕರ್ತರಾದ ಮಲಾರ್ ಜಯರಾಮ ರೈ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಆಶಾ ದಿಲೀಪ್ ಸುಳ್ಯಮೆ ಇವರು ಕೃತಿ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯರು ಹಾಗೂ ವಿದ್ಯಾರ್ಥಿಗಳಿಂದ ಸ್ವರಚಿತ ಕಥಾ ವಾಚನ ಪ್ರಸ್ತುತಗೊಳ್ಳಲಿದೆ.