ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಆಯೋಜಿಸಿದ ‘ಸುಕೃತಿ’ 17ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇದರ ಉದ್ಘಾಟನಾ ಸಮಾರಂಭವು ದಿನಾಂಕ 30 ಏಪ್ರಿಲ್ 2025 ರಂದು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪಾದೇಕಲ್ಲು ವಿಷ್ಣುಭಟ್ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾತನಾಡಿ “ಕನ್ನಡ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗಿಂತ ಶ್ರೀಮಂತವಾದುದು ಮತ್ತು ಕನ್ನಡ ನಾಡು ಕಲೆ, ಸಾಹಿತ್ಯ, ಅಧ್ಯಾತ್ಮದ ತವರೂರು. ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಷರ ಪುರುಷೋತ್ತಮನಾದ ಶ್ರೀ ಕೃಷ್ಣನ ಸನ್ನಿಧಾನದಲ್ಲಿ ಅಕ್ಷಯ ತೃತೀಯದಂದು ಆಯೋಜನೆಯಾಗಿರುವುದು ನಿಜವಾದ ಅಕ್ಷರ ತೃತೀಯವಾಗಿದೆ. ಸಾಹಿತ್ಯ ಸಮ್ಮೇಳನ ಸಾರ್ಥಕ ಆಗಬೇಕಾದರೆ ಸಾಹಿತ್ಯವು ಹಿತದಿಂದ ಸಹಿತವಾಗಿರಬೇಕು. ಈ ಸಮ್ಮೇಳನ ಶ್ರೀ ಕೃಷ್ಣನ ಆರಾಧನೆಯಾಗಿದೆ” ಎಂದರು.
ಕ. ಸಾ. ಪ. ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಮಾತನಾಡಿ “ಕನ್ನಡಿಗರು ಸ್ವಾಭಿಮಾನಿಗಳು. ಪರಶುರಾಮ ಕರ್ನಾಟಕದ ಸ್ವಾಭಿಮಾನದ ಸಂಕೇತವಾಗಿದ್ದಾರೆ. ಕನ್ನಡದ ಅಸ್ಮಿತೆ ಚಿರಕಾಲ ಬೆಳಗಬೇಕು. ಕನ್ನಡವು ಭಾರತಕ್ಕೆ ಭವ್ಯ ಪ್ರಭೆಯನ್ನು ನೀಡಲಿ” ಎಂದು ಹೇಳಿದರು.
ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ “ಯುವಜನತೆ ನಾಡಿನ ಆಚಾರ, ವಿಚಾರ ಹಾಗೂ ಇತಿಹಾಸವನ್ನು ಅರಿಯುವ ಪ್ರಯತ್ನ ಮಾಡಬೇಕು. ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಯುವ ಜನತೆ ಹೆಚ್ಚೆಚ್ಚು ಪಾಲ್ಗೊಳ್ಳಬೇಕು” ಎಂದರು.
ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಭಾಗವಹಿಸಿ ಶುಭ ಹಾರೈಸಿದರು. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕ. ಸಾ. ಪ. ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಆನಂದ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ಕ. ಸಾ. ಪ. ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಸುಬ್ರಹ್ಮಣ್ಯ ಶೆಟ್ಟಿ ಪ್ರಸ್ತಾವನೆಗೈದರು.
Subscribe to Updates
Get the latest creative news from FooBar about art, design and business.
Previous Articleಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04
Next Article ಮೇಘಮೈತ್ರಿ ಸಮ್ಮೇಳನಗಳ ಮೂರು ದತ್ತಿ ಪ್ರಶಸ್ತಿ ಪ್ರಕಟ