ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ದಿನಾಂಕ 17 ಮೇ 2025ರಂದು ಉಡುಪಿಯ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರ ಇಲ್ಲಿನ ಸಭಾಂಗಣದಲ್ಲಿ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರೊ. ಎಂ.ಎಲ್. ಸಾಮಗ ಇವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮ್ಮೇಳನದ ಸಭಾಂಗಣದಲ್ಲಿ ಪುಸ್ತಕ ಮಳಿಗೆಗಳಿಗೆ ಅವಕಾಶವಿರುತ್ತದೆ. ಆಸಕ್ತರು ಕ.ಸಾ.ಪ. ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ 94803 46069 ಇವರನ್ನು ಸಂಪರ್ಕಿಸಬಹುದು ಎಂದು ಉಡುಪಿ ತಾಲೂಕು ಕ.ಸಾ.ಪ. ತಿಳಿಸಿದೆ.