Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ
    Competition

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದ್ರಿ : ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ‘ಸಿರಿಪರ್ಬ – 2025’ ತುಳು ಸಾಂಸ್ಕೃತಿಕ ಉತ್ಸವವು ದಿನಾಂಕ 06 ಮೇ 2025ರಂದು ಜರಗಿತು.

    ಈ ಕಾರ್ಯಕ್ರಮದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ “ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ, ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ” ಎಂದು ಹೇಳಿದ್ದಾರೆ.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಿರಿಪರ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ‘ತುಳು ಸಾಂಸ್ಕೃತಿಕ ವೈಭವ’ ಅಂತರ್ಕಾಲೇಜು ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ಶಿಕ್ಷಣ ಸಂಸ್ಥೆಗಳಲ್ಲಿ ತುಳು ಮಾತನಾಡಲು ತೀವ್ರ ವಿರೋಧವಿದ್ದ ಕಾಲವಿತ್ತು; ಆದರೆ ಈಗ ಅದು ಬದಲಾಗಿದೆ. ಪ್ರಾಥಮಿಕ ಹಂತದಿಂದ ಕಾಲೇಜಿನವರೆಗೆ ತುಳುವನ್ನೊಂದು ಪಠ್ಯವಾಗಿ ಸರಕಾರ ಅನುಮೋದಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ತುಳು ಚಟುವಟಿಕೆಗಳಿಗೆ ವೇದಿಕೆಗಳು ಸಿದ್ಧವಾಗಿವೆ. ತುಳುವೇತರರೂ ತುಳು ಭಾಷೆ ಕಲಿತು ಅವುಗಳಲ್ಲಿ ಭಾಗವಹಿಸುವಂತಾಗಬೇಕು. ಎಲ್ಲಾ ಕಡೆ ತೌಳವ ಸಂಸ್ಕೃತಿಯನ್ನು ಪಸರಿಸುವ ಮೂಲಕ ತುಳು ತಲೆಯೆತ್ತಿ ನಿಲ್ಲಬೇಕು” ಎಂದು ಹೇಳಿದರು.

    ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಸಂಸ್ಥೆಯ ವಿದ್ಯಾರ್ಥಿಗಳಾದ ಹಾರ್ದಿಕ್ ಎಚ್. ಶೆಟ್ಟಿ, ಜೆವಿತಾ ಪೆರ್ಲ್ ಕ್ರಾಸ್ಟಾ, ಪ್ರಶಸ್ತಿ ಎಂ.ಎಸ್. ಇವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ತುಳು ಚಲನಚಿತ್ರ ನಟ ಮತ್ತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಪದವಿ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ. ಯೋಗೀಶ್ ಕೈರೋಡಿ, ಶಿಕ್ಷಕ – ಕಲಾವಿದ ಬಾಲಕೃಷ್ಣ ರೇಖ್ಯ ಮುಖ್ಯ ಅತಿಥಿಗಳಾಗಿದ್ದರು. ಉಪನ್ಯಾಸಕ ಹೇಮಂತ್ ಸುವರ್ಣ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

    ಸಮಾರಂಭದಲ್ಲಿ ತುಳುನಾಡಿನ ಜಾನಪದ ಸಂಸ್ಕೃತಿಗೆ ಪೂರಕವಾದ ಯಕ್ಷಗಾನ, ಚೆಂಡೆ ವಾದನ, ಕಂಬಳದ ಕೋಣಗಳು, ಕುಣಿತ ಭಜನೆ, ದಫ್ ಕುಣಿತಗಳನ್ನೊಳಗೊಂಡ ವರ್ಣರಂಜಿತ ಶೋಭಾಯಾತ್ರೆ ನಡೆಯಿತು. ಅಲ್ಲದೆ ತುಳು ಬದುಕಿನ ಭೌತಿಕ ಸಂಸ್ಕೃತಿಯನ್ನು ಪ್ರತಿನಿಧಿಸುವ ವಿವಿಧ ಪಾರಂಪರಿಕ ವಸ್ತುಗಳು, ದಿನಬಳಕೆಯ ಸಾಮಾನು, ಕೃಷಿ ಉಪಕರಣಗಳು, ಆಭರಣ, ಹಸ್ತ ಕಲಾಕೃತಿ, ಶಿಲ್ಪ ವೈವಿಧ್ಯ, ಭೂತಕೋಲ, ನಾಗಾರಾಧನೆ, ಸಂಗೀತ ವಾದ್ಯ, ಯಂತ್ರೋಪಕರಣಗಳು ಸೇರಿದಂತೆ ವೈವಿಧ್ಯಮಯ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

    ದಿನವಿಡೀ ನಡೆದ ಸ್ಪರ್ಧೆಯಲ್ಲಿ ಜಿ.ಎಫ್.ಜಿ.ಸಿ. ವಾಮದಪದವು, ಮಹಾವೀರ ಕಾಲೇಜು ಮೂಡಬಿದಿರೆ, ಎಸ್‌.ಡಿ.ಎಂ. ಪಿಜಿ ಸೆಂಟರ್, ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಶ್ರೀ ಧವಳ ಕಾಲೇಜು, ಆಳ್ವಾಸ್ ಪದವಿ ಕಾಲೇಜು ಮುಂತಾದ ತಂಡಗಳು ಭಾಗವಹಿಸಿದ್ದವು. ಪ್ರತೀ ತಂಡವೂ ತುಳುನಾಡಿನ ಪುರಾತನ ಆಚರಣೆಗಳು, ಜಾನಪದ ಚರಿತ್ರೆ, ಆರಾಧನಾ ಪರಂಪರೆ, ಹಾಡು – ಕುಣಿತಗಳನ್ನೊಳಗೊಂಡ ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಕಲಾತ್ಮಕವಾಗಿ ರೂಪಿಸಿ ಪ್ರಸ್ತುತಪಡಿಸಿದವು. ಅಂತಿಮ ಹಂತದಲ್ಲಿ ವಿಜೇತರಾದ ಶ್ರೀ ಧವಳ ಕಾಲೇಜು ಮೂಡಬಿದಿರೆ (ಪ್ರಥಮ), ಆಳ್ವಾಸ್ ಪದವಿ ಕಾಲೇಜು (ದ್ವಿತೀಯ) ಇವರಿಗೆ ಸ್ಮರಣಿಕೆಯೊಂದಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಾಲಕೃಷ್ಣ ರೇಖ್ಯ ತೀರ್ಪುಗಾರರಾಗಿ ಸಹಕರಿಸಿದರು. ವಿದ್ಯಾರ್ಥಿ ನಾಯಕ ದೀಕ್ಷಿತ್ ಡಿ. ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ರೈ ವಂದಿಸಿ, ರಿಶಾಂಕ್ ತೋಡಾರ್ ಮತ್ತು ಅಜೇಯ್ ಕಾರ್ಯಕ್ರಮ ನಿರೂಪಿಸಿದರು.

    baikady competition Cultural exhibition roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ
    Next Article ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.