ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ಮತ್ತು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ದಿ. ಪುಳಿಮಾರು ಎಮ್. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಮತ್ತು ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಪ್ರದಾನ ಸಮಾರಂಭವನ್ನು ದಿನಾಂಕ 21 ಮೇ 2025ರಂದು ಅಪರಾಹ್ನ 2-30 ಗಂಟೆಗೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ವಹಿಸಲಿದ್ದು, ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಸಾಹಿತಿ ಶ್ರೀಮತಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರು ಉಪನ್ಯಾಸ ನೀಡಲಿದ್ದು, ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಬಸವ ಇವರಿಗೆ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.